*,ಧ್ಯಾನ ಎಂದರೆ ಏಕಾಗ್ರತೆ.*
ನಮ್ಮಮನಸ್ಸು ಚಂಚಲವಾಗಿರುತ್ತದೆ. ಈ ಚಂಚಲತೆಯನ್ನು ಹೋಗಲಾಡಿಸಿ ಮನಸ್ಸನ್ನು ಧೃಡವಾಗಿರಿಸುವ ಪ್ರಕ್ರಿಯೆಯೇ “ಧ್ಯಾನ”.ದೃಢವಾದ ಮನಸ್ಸಿನಿಂದ ಸರಿಯಾದ ನಿರ್ಣಯಗಳನ್ನು ತೆಗೆದು ಕೊಳ್ಳ ಬಹುದು. ಹಾಗೆ ಸರಿಯಾದ ನಿರ್ಣಯಗಳಿಂದ ತೆಗೆದು ಕೊಂಡ ನಿರ್ಧಾರವು ತಪ್ಪಾಗಲಿಕ್ಕೆಸಾಧ್ಯವಿಲ್ಲ.
ಯಾವುದೇ ಕಾರ್ಯಗಳನ್ನು ಏಕಾಗ್ರತೆಯಿಂದ ಮಾಡುವವನಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ. ಧ್ಯಾನದಿಂದ ಏಕಾಗ್ರತೆ ಹೆಚ್ಚುತ್ತದೆ. ಮನಸ್ಸಿನ ಸಂಕಟಗಳು ದೂರವಾಗುತ್ತದೆ. ಮನಸ್ಸನ್ನು ಉಲ್ಲಾಸದಾಯಕವಾಗಿಯೂ ಇರುತ್ತದೆ ಧ್ಯಾನ ಮಾಡುವುದರಿಂದ ಮೂಡನಂಬಿಕೆಯಿಂದ ದೂರ ಇರಬಹುದು , ಹಾಗೂ ಬಹಳ ದೊಡ್ಡ ಪ್ರಮಾಣದ ಪ್ರಯೋಜನವಾಗುತ್ತದೆ,..!