ಬೆಂಗಳೂರು : ಖೋ ಖೋ ವಿಶ್ವಕಪ್ 2025 ನಲ್ಲಿ ಪುರುಷರ ತಂಡ ನೇಪಾಳ ತಂಡವನ್ನು ಮಣಿಸಿ ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡಿರುವ ಮಹಿಳೆ ಮತ್ತು ಪುರುಷರ ತಂಡಕ್ಕೆ ಸಿಎಂ ವಿಶ್‌ ಮಾಡಿದ್ದಾರೆ.

ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ನೇಪಾಳದ ವಿರುದ್ಧ 54-36 ಅಂತರದ ಗೆಲುವು ಸಾಧಿಸಿದ್ದು, ಪ್ರತೀಕ್ ವೈಕರ್ ಹಾಗೂ ರಾಮ್ ಜಿ ಕಶ್ಯಪ್ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಮೊಟ್ಟಮೊದಲ ಖೋ – ಖೋ ವಿಶ್ವಕಪ್ ಪಂದ್ಯಾಕೂಟದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೋ – ಖೋ ತಂಡಕ್ಕೆ ಅಭಿನಂದನೆಗಳನ್ನು ಸಿಎಂ ಸಿದ್ದರಾಮಯ್ಯ ಎಕ್ಸ್‌ ಮೂಲಕ ತಿಳಿಸಿದ್ದಾರೆ. ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ ಶಾಶ್ವತವಾಗಿ ಉಳಿಯಲಿದೆ.

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕುರುಬೂರಿನ ಯುವತಿ ಚೈತ್ರ. ಬಿ ಅವರು ವಿಶ್ವವಿಜೇತ ಮಹಿಳಾ ಖೋ – ಖೋ ತಂಡದ ಭಾಗವಾಗಿರುವುದು ನಾಡಿಗೆ ಹೆಮ್ಮೆಯ ಸಂಗತಿಯಾಗಿದ್ದು, ಭಾರತೀಯರ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *