ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಆಗ್ತೀನಿ. ಅವಕಾಶ ಕೊಟ್ಟರೆ ನಾನೂ ಮುಖ್ಯಮಂತ್ರಿ ಆಗಲು ರೆಡಿ ಇದ್ದೀನಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಮುಖ್ಯಮಂತ್ರಿ ಯಾರು ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ಏನು ನಿರ್ಧರಿಸುತ್ತದೋ ಅದನ್ನು ಪಾಲಿಸುತ್ತೇನೆ. ಅವರ ನಿರ್ಧಾರವನ್ನು ಗೌರವಿಸುತ್ತೇನೆ. ಯಾರನ್ನೇ ಮುಖ್ಯಮಂತ್ರಿ ಮಾಡಿದರೂ ಅವರನ್ನು ಬೆಂಬಲಿಸುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಗುವ ಅರ್ಹತೆ ಇರುವವರು ಸಾಕಷ್ಟು ಹಿರಿಯರು ಇದ್ದಾರೆ. ಹೈಕಮಾಂಡ್ ಯಾರನ್ನು ಸಿಎಂ ಮಾಡುತ್ತಾರೋ ಅವರೇ ನಮ್ಮ ನಾಯಕ. ಸಿಎಂ ಯಾರು ಆಗಬೇಕು ಎಂದು ನಾಲ್ಕು ಜನ ಸೇರಿ ನಿರ್ಧರಿಸಿದ್ದಾರೆ. ಅವರು ಏನು ನಿರ್ಧರಿಸಿದ್ದಾರೆ ಅನ್ನೋದು ಯಾರಿಗೂ ಗೊತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದರು.